Ayudha Pooja / Maha Navami / Vijaya Dashami / ಮಹಾನವಮಿ / ಆಯುಧ ಪೂಜೆ / ವಿಜಯದಶಮಿ

ಮಹಾ ನವಮಿ ಅಥವಾ ಆಯುಧ ಪೂಜೆ ಹಬ್ಬವನ್ನು ನವರಾತ್ರಿಯ ಒಂಭತ್ತನೆ ದಿನ ಆಚರಿಸುತ್ತಾರೆ. ಆಶ್ವಯುಜ ಮಾಸದ ಶುಕ್ಲ ಪಕ್ಷದ ನವಮಿಯ ದಿನ. ಈ ದಿನ ಹೆಸರೇ ಹೇಳುವಂತೆ ಆಯುಧಗಳಿಗೆ ಪೂಜೆ ಮಾಡುವ ದಿನ. ಹಿಂದೆ ಮೈಸೂರಿನ ಮಹಾರಾಜರು ಮಹಾನವಮಿಯ ದಿನ ಎಲ್ಲಾ ಆಯುಧಗಳನ್ನು, ತಮ್ಮ ಪಟ್ಟದ ಕತ್ತಿಯನ್ನೂ ಸಹ ತೆಗೆದಿಟ್ಟು ಪೂಜೆ ಮಾಡುತ್ತಿದ್ದರು. ಈ ದಿನ ಅವುಗಳಿಗೆ ವಿರಾಮ/ವಿಶ್ರಾಂತಿ/ರಜಾ ದಿನ. ಈ ಆಯುಧಗಳು ನಮ್ಮನ್ನು ವರುಷವೆಲ್ಲ ಕಾಪಾಡಿವೆ. ಈ ಒಂದು ದಿನ ಅವುಗಳಿಗೆ ವಿರಾಮ ಕೊಟ್ಟು, ಅವುಗಳಿಗೆ ಕೃತಜ್ಞತೆ ಸಲ್ಲಿಸಿ, ಮುಂದಿನ ವರ್ಷವೂ ಹೀಗೆ ನಮ್ಮನ್ನು ಕಾಪಾಡಿ ಎಂದು ಅವುಗಳಿಗೆ ಪೂಜೆ ಮಾಡುತ್ತಿದ್ದರು. ರಾಜರ ಆಳ್ವಿಕೆ ಮುಗಿದರೂ, ಈ ಆಯುಧ ಪೂಜೆ ಇಂದಿಗೂ ಎಲ್ಲರೂ ಆಚರಿಸುತ್ತಾರೆ. ಈಗಿನ ಕಾಲದಲ್ಲಿ ಮನೆಗಳಲ್ಲಿ ದಿನ ನಿತ್ಯ ಉಪಯೋಗಿಸುವ ಆಯುಧಗಳು, ವಾಹನಗಳಿಗೆಲ್ಲ ಪೂಜೆ ಮಾಡುತ್ತಾರೆ. ಕಾರ್ಖಾನೆ,ಉದ್ದಿಮೆ, ಕಛೇರಿ ಎಲ್ಲಾ ಕಡೆ ಅಲ್ಲಿ ಉಪಯೋಗಿಸುವ ಯಂತ್ರಗಳೂ, ಉಪಕರಣಗಳಿಗೆ ಪೂಜೆ ಮಾಡುತ್ತಾರೆ, ಅವುಗಳನ್ನು ಈ ದಿನ ಉಪಯೊಗಿಸುವುದಿಲ್ಲ.

Comments